Breaking News

ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ: ಆರೋಪಿಗಳಾದ ಚೇತನ್‌, ಲಿಖಿತ್‌ಗೆ ಜಾಮೀನು

Spread the love

ಹಾಸನ: ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಗುರುವಾರ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರನೇ ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೇ 12 ರಂದು ಬಂಧಿಸಿದ್ದರು.

ಬಂಧನದ ಹದಿನೆಂಟು ದಿನಗಳ ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಸದ್ಯ ಹಾಸನದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿರುವ ಚೇತನ್ ಹಾಗೂ ಲಿಖಿತ್‌ಗೌಡ ಗುರುವಾರ ಸಂಜೆ ಅಥವಾ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ