Breaking News

ಹಾವು ಕಚ್ಚಿ ರೈತ ಮಹಿಳೆ ಮೃತ್ಯು

Spread the love

ಭರಮಸಾಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ (55) ಮೃತ ಮಹಿಳೆ. ಬುಧವಾರ ತಮ್ಮದೇ ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ ಬಲಗೈಗೆ ಹಾವು ಕಚ್ಚಿದೆ.

Bharamasagara; ಹಾವು ಕಚ್ಚಿ ರೈತ ಮಹಿಳೆ ಮೃತ್ಯು

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆ ಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.

ಮೃತರು ಪತಿ, ಒರ್ವ ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ