Breaking News

ಮತ್ತೆ ಪೆಟ್ರೋಲ್ ಬೆಲೆ ಹೆಚ್ಚಳ…..

Spread the love

ನವದೆಹಲಿ: ಭಾನುವಾರ, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಿಸಿದ್ದ ತೈಲ ಕಂಪನಿಗಳು ಇಂದೂ ಕೂಡ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಲೀಟರ್​ ಪೆಟ್ರೋಲ್​ಗೆ 54 ಪೈಸೆ ಹಾಗೂ ಡೀಸೆಲ್​ಗೆ 58 ಪೈಸೆ ಹೆಚ್ಚಳವಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಪರಿಣಾಮ, 82 ದಿನಗಳ ಲಾಕ್​​ಡೌನ್ ವಿರಾಮದ ಬಳಿಕ ಭಾನುವಾರದಿಂದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಏರಿಕೆ ಮಾಡುತ್ತಾ ಬಂದಿವೆ.

ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಪೆಟ್ರೋಲ್, ಡೀಸೆಲ್ ಬೆಲೆ ಕ್ರಮವಾಗಿ 71.86 ರೂ. ಮತ್ತು 69.99 ರೂ, ಸೋಮವಾರ 72.46 ರೂ ಮತ್ತು 70.59 ರೂ ಇತ್ತು. ಇಂದು ಪೆಟ್ರೋಲ್ ದರ 73 ರೂ.ಗೆ ಹಾಗೂ ಡೀಸೆಲ್ ದರ 71.17 ರೂಪಾಯಿಗೆ ಏರಿಕೆಯಾಗಿದೆ. ದೆಹಲಿಯೊಂದಿಗೆ ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಹೈದರಾಬಾದ್​ಗೂ ಇದು ಅನ್ವಯವಾಗಲಿದೆ. ಬೆಂಗಳೂರಲ್ಲಿ ಲೀಟರ್​ ಪೆಟ್ರೋಲ್​​​​​ಗೆ ಇಂದು 75.35 ರೂ. ದರವಿದೆ. ಇನ್ನು ಲೀಟರ್​ ಡೀಸೆಲ್​​ಗೆ 67.66 ರೂ. ನಿಗದಿಯಾಗಿದೆ


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ