Breaking News

ಜೂನ್‌ 2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ನಿರೀಕ್ಷೆ

Spread the love

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿಗೆ ಜೂನ್‌ 2ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿದ್ದು ಈ ವರ್ಷ ಉತ್ತಮ ಮುಂಗಾರು ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Monsoon: ಜೂನ್‌ 2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ನಿರೀಕ್ಷೆ

ನೈಋತ್ಯ ಮಾನ್ಸೂನ್‌ ಮೇ 30ರಂದು ಕೇರಳ ಪ್ರವೇಶಿಸಿದೆ. ಸಾಮಾನ್ಯವಾಗಿ ನೈಋತ್ಯ ಮುಂಗಾರು ಕೇರಳವನ್ನು ಜೂನ್‌ 1ರಂದು ಪ್ರವೇಶ ಮಾಡುತ್ತಿತ್ತು.

ಆದರೆ ಈ ವರ್ಷ 2 ದಿನ ಮೊದಲೇ ಕೇರಳ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಜೂನ್‌ 2ರಂದು ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಗೆ ಮುಂಗಾರು ಪ್ರವೇಶಿರುವ ಹೆಚ್ಚಿನ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಮುಂದಿನ 2-3 ದಿನಗಳಲ್ಲಿ ನೈಋತ್ಯ ಮಾನ್ಸೂನ್‌ ಮಧ್ಯ ಅರೇಬಿಯನ್‌ ಸಮುದ್ರದ ಕೆಲವು ಭಾಗಗಳು, ಲಕ್ಷದ್ವೀಪ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡಿನ ಕೆಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ. ಒಂದು ಚಂಡಮಾರುತದ ಪರಿಚಲನೆಯು ದಕ್ಷಿಣ ಕೇರಳದ ಆಗ್ನೇಯ ಅರೇಬಿಯನ್‌ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ಎತ್ತರದಲ್ಲಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ