ಬೆಂಗಳೂರು ಮೇ 31: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಬೆಂಗಳೂರು ನ್ಯಾಯಾಲಯಕ್ಕೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ವಾದ ಪ್ರತಿವಾದಗಳ ನಂತರ ಅವರನ್ನು ಕೋರ್ಟ್ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಲೈಂಗಿಕ ಕಿರುಕುಳ ಆರೋಪದ ವಿಚಾರಣೆಗಾಗಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿತ್ತು.
ಇದೇ ವೇಳೆ ವಕೀಲರ ಭೇಟಿ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಅವಕಾಶ ನೀಡಿದ ಕೋರ್ಟ್ ಕಸ್ಟಡಿಯಲ್ಲಿ ಕಿರುಕುಳ ನೀಡದಂತೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ. ಹೊಳೆನರಸೀಪುರದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಮೊದಲ ಎಫ್‌ಐಆರ್ ಬಗ್ಗೆ ಅವರ ವಿಚಾರಣೆ ನಡೆಯಲಿದೆ.