ಚಿಕ್ಕೋಡಿ: ಕೌಟುಂಬಿಕ ಕಲಹದ ಹಿನ್ನೆಲೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆಯಲ್ಲಿ ವ್ಯಕ್ತಿಯೋರ್ವನ ಕಿವಿ ಕತ್ತರಿಸಿದ ಘಟನೆ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಜನವಾಡ ಗ್ರಾಮದ ಸಿದ್ದು ಪೂಜಾರಿಗೆ ಆತನ ಪತ್ನಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಹಲ್ಲೆಯಲ್ಲಿ ಸಿದ್ದು ಪೂಜಾರಿ ಕಿವಿ ತುಂಡಾಗಿತ್ತು. ಜತೆಗೆ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡ ತಂದೆಯನ್ನು ಕೂಡಲೇ ಬೈಕ್ ಮೇಲೆ ಕೂರಿಸಿಕೊಂಡ ಮಗ ಮಾಳು ಪೂಜಾರಿ ಸದಲಗಾ ಸರ್ಕಾರಿ ಕರೆದುಕೊಂಡು ಹೋಗಿದ್ದು, ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ.
Laxmi News 24×7