Breaking News

ಸ್ಪ್ರೈಟ್ ತುಂಬಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ

Spread the love

ವಿಜಯಪುರ: ಸ್ಪ್ರೈಟ್ ಕಂಪನಿಯ ಪಾನೀಯ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತವಾದ ಘಟನೆ ಬಬಲೇಶ್ವರ ತಾಲೂಕಿನಲ್ಲಿ ಜರುಗಿದೆ.

ಭಾನುವಾರ ನಸುಕಿನಲ್ಲಿ ಜಮಖಂಡಿ-ವಿಜಯಪುರ ಮಾರ್ಗವಾಗಿ ಸ್ಪ್ರೈಟ್ ಕಂಪನಿಯ ಪೇಯದ ಬಾಟಲಿಗಳನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ನೋಂದಣಿ ಹೊಂದಿದ್ದ ಲಾರಿ ಬಬಲೇಶ್ವರ ತಾಲೂಕಿನ ಸಾರವಾಡ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ.

Babaleshwara: ಸ್ಪ್ರೈಟ್ ತುಂಬಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ: ಸಂಚಾರಕ್ಕೆ ಸಮಸ್ಯೆ

ಇದರಿಂದಾಗಿ ಲಾರಿ ರಸ್ತೆ ಮಧ್ಯೆಯೇ ಮಗುಚಿ ಬಿದ್ದಿದ್ದು, ಪೇಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಲ್ಲಿ ಚಾಲಕ ಸೇರಿದಂತೆ ಯಾರಿಗೂ ಅಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಲಾರಿ ರಸ್ತೆಯಲ್ಲೇ ಬಿದ್ದಿರುವ ಕಾರಣ ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜನರು ಪೇಯದ ಬಾಟಲಿಗಳನ್ನು ನೋಡಲು ಜಮಾಯಿಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ