ಗದಗ: ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ನಿಷ್ಪಕ್ಷಪಾತ ತನಿಖೆಗಾಗಿ ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಅವರು ಜಾಣಕುರುಡು ಪ್ರದರ್ಶಿಸುವ ಮೂಲಕ ಭ್ರಷ್ಟಾಚಾರಿಗಳನ್ನು ರಕ್ಷಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ.
ಆದಕಾರಣ, ಸಿದ್ದರಾಮಯ್ಯ ಅವರು ಮುಖಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು’ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪುರ ಆಗ್ರಹಿಸಿದ್ದಾರೆ.
‘ಹಗರಣದ ಕುರಿತು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿಯ ಸಾವಿಗೆ ನ್ಯಾಯ ಒದಗಿಸಿಕೊಡುವ ಬದಲು ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಭಾವಿಸಿ ಸತ್ಯವನ್ನು ಮುಚ್ಚಿಡುವ ಪ್ರಯತ್ನವನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ’ ಎಂದು ದೂರಿದ್ದಾರೆ.