Breaking News

ಭ್ರೂಣ ಹತ್ಯೆ ತಡೆಯಲು ರಾಜ್ಯ ಸರ್ಕಾರ ವಿಫಲ: ಹೇಮಲತಾ ನಾಯಕ

Spread the love

ಕೊಪ್ಪಳ: ‘ರಾಜ್ಯದಲ್ಲಿ ಮೇಲಿಂದ ಮೇಲೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಇವುಗಳನ್ನು ತಡೆಯಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ವಿಧಾನಪರಿಷತ್‌ ಸದಸ್ಯೆ ಬಿಜೆಪಿಯ ಹೇಮಲತಾ ನಾಯಕ ಆರೋಪಿಸಿದರು.

ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯ ಸರ್ಕಾರ ಸಮಾನತೆ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವನೆ ಹೊಂದಿದೆ.

ಈ ಕೃತ್ಯದಲ್ಲಿ ತೊಡಗಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೆಣ್ಣು ಮಕ್ಕಳಿಗೆ ಗ್ಯಾರಂಟಿಗಳನ್ನು ನೀಡುತ್ತಿರುವ ಸರ್ಕಾರ ಭ್ರೂಣ ಹತ್ಯೆ ತಡೆಯುವ ಮತ್ತು ಹೆಣ್ಣುಮಕ್ಕಳ ಸುರಕ್ಷಿತ ಜೀವನಕ್ಕೆ ಯಾಕೆ ಗ್ಯಾರಂಟಿ ಕೊಡುತ್ತಿಲ್ಲ’ ಎಂದು ಪ್ರಶ್ನಿಸಿದರು.

‘ಪ್ರಸ್ತುತ ದಿನಮಾನಗಳಲ್ಲಿ ಲಿಂಗ ತಾರತಮ್ಯ ವ್ಯಾಪಕವಾಗಿದ್ದು, ಹೆಣ್ಣು ಭ್ರೂಣ ಹತ್ಯೆ ಎಲ್ಲರೂ ತಲೆ ತಗ್ಗಿಸುವ ಪ್ರಕರಣವಾಗಿದ್ದು ಇದರಲ್ಲಿ ಆಡಳಿತ ವೈಫಲ್ಯ ಎದ್ದು ಕಾಣುತ್ತದೆ’ ಎಂದರು.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ