ಬೈಲಹೊಂಗಲ: ತಾಲ್ಲೂಕಿನ ಬೇವಿನಕೊಪ್ಪ ಗ್ರಾಮದ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ನೂತನ ಸೇತುವೆಯ ಮುಂಭಾಗದಲ್ಲಿ ವೀರಕೇಸರಿ ಅಮಟೂರ ಬಾಳಪ್ಪನವರ ಮೂರ್ತಿಯನ್ನು ನಿರ್ಮಿಸಿ ಸುತ್ತಲೂ ಉದ್ಯಾನ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.
ಗ್ರಾಮದಿಂದ ಶಾಸಕರ ನಿವಾಸಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಬೇವಿನಕೊಪ್ಪ, ಸ್ವಾತಂತ್ರ್ಯ ಹೋರಾಟಗಾರ ಬಾಳಪ್ಪನವರ ತ್ಯಾಗ, ಬಲಿದಾನ, ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಮಕ್ಕಳಿಗೆ ಪರಿಚಯಿಸಬೇಕು ಎಂದು ತಿಳಿಸಿದರು.