Breaking News

ಎಕ್ಸಿಟ್‌ ಪೋಲ್‌ ಬಳಿಕ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ?

Spread the love

18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದೆ. ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರ ಬಿದ್ದಿವೆ. ಈ ಬಗ್ಗೆ ಹಲವು ಪಕ್ಷಗಳು ಮುಖಂಡರು ತಮ್ಮ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಸೋನಿಯಾ ಗಾಂಧಿ ಮಾತ್ರ ಮೌನಕ್ಕೆ ಶರಣಾಗಿದ್ದಾರು. ಅವರು ಸಹ ಸೋಮವಾರ ಈ ಬಗ್ಗೆ ತಮ್ಮ ಮಾತುಗಳನ್ನು ತಿಳಿಸಿದ್ದಾರೆ.

ಎಕ್ಸಿಟ್‌ ಪೋಲ್‌ ಬಳಿಕ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ? ಹೇಳಿದ್ದೇನು?

ಹಲವು ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭಸಿದೆ ಎಂದು ತಿಳಿಸಿವೆ. ಅಲ್ಲದೆ ಬಿಜೆಪಿ ಹ್ಯಾಟ್ರಿಕ್‌ ಸಾಧನೆ ಮಾಡುವುದು ಕನ್ಫರ್ಮ್‌ ಎಂದು ತಿಳಿಸಿವೆ. ಬಿಜೆಪಿ 400 ಗಡಿ ಮುಟ್ಟುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಈ ಬಗ್ಗೆ ಪರ ಹಾಗೂ ವಿರೋಧ ಚರ್ಚೆಗಳು ಆರಂಭವಾಗಿವೆ. ಈ ನಡುವೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸಹ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ.

ಸೋನಿಯಾ ಹೇಳಿದ್ದೇನು?

ಈಗ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಮಾತ್ರ ಬಂದಿದೆ. ಇನ್ನು ನಿಶ್ಚಿತ ಫಲಿತಾಂಶ ಬರುವುದು ಮಾತ್ರ ಬಾಕಿ ಇದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದರು.

ವಾಸ್ತವವಾಗಿ, ಸಾರ್ವಜನಿಕ ಎಕ್ಸಿಟ್ ಪೋಲ್‌ನಲ್ಲಿ 295 ಸ್ಥಾನಗಳನ್ನು ಪಡೆಯಲಿದೆ ಎಂದು ವಿರೋಧ ಪಕ್ಷದ ಮೈತ್ರಿಕೂಟ ‘INDIA’ ಹೇಳಿಕೊಳ್ಳುತ್ತಿದೆ. ಇತ್ತೀಚೆಗಷ್ಟೇ ವಿಪಕ್ಷಗಳ ಮೈತ್ರಿಕೂಟದ ‘INDIA’ ಸಭೆಯ ನಂತರವೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯವನ್ನು ಪುನರುಚ್ಚರಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ