Breaking News

ಸಿಕ್ಸರ್ ಬಾರಿಸಿದ ಬೆನ್ನಲ್ಲೇ ಮೈದಾನದಲ್ಲೇ ಮೃತಪಟ್ಟ ಯುವಕ!

Spread the love

ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ.

ಮೀರಾ ರಸ್ತೆ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಎದುರಾಳಿ ಬೌಲರ್ ಗೆ ಮುಂದೆ ಬಂದು ಸಿಕ್ಸರ್ ಬಾರಿಸುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾನೆ.

ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಸಿಕ್ಸರ್ ಬಾರಿಸಿದ ಬೆನ್ನಲ್ಲೇ ಮೈದಾನದಲ್ಲೇ ಮೃತಪಟ್ಟ ಯುವಕ!

ಪಿಂಕ್ ಸಮವಸ್ತ್ರ ಧರಿಸಿದ ವ್ಯಕ್ತಿ ಸಿಕ್ಸರ್ ಅನ್ನು ಬೌಲರ್ ತಲೆಯ ಮೇಲೆ ಹೊಡೆದು ನಂತರದ ಎಸೆತಕ್ಕೆ ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಅಂಪೈರ್ ಸಿಕ್ಸರ್ ಸನ್ನೆ ಮಾಡುತ್ತಿದ್ದಾಗಲೇ ಬ್ಯಾಟ್ಸ್ ಮನ್ ಕುಸಿದು ಬಿದ್ದಿದ್ದಾರೆ.

ಕೂಡಲೇ ಆಟಗಾರರು ಓಡಿ ಬಂದು ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ವ್ಯಕ್ತಿ ಸಾವಿಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ