Breaking News

ಲೋಕಸಭೆ ಚುನಾವಣೆ ಫಲಿತಾಂಶ 2024: ಸಚಿವರ ಮಕ್ಕಳಲ್ಲಿ ಯಾರ್ಯಾರು ಗೆದ್ರು? ಯಾರು ಸೋತ್ರು?

Spread the love

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ,​ ಯುವ ಮುಖ ಸಂಯಕ್ತಾ ಪಾಟೀಲ್​ (Samyukta Shivanand Patil) ಅವರನ್ನು ಅಖಾಡಕ್ಕಿಳಿಸಿತ್ತು. ಆದರೆ ಸಂಯುಕ್ತ ಪಾಟೀಲ್​ ಅವರಿಗೆ ಸೋಲಾಗಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarakiholi) ಅವರು ಕಣದಲ್ಲಿದ್ದರು. ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಣದಲ್ಲಿದ್ದರು. ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆಲುವಿನ ವಿಶ್ವಾಸ ಹೊಂದಿತ್ತು. ಆದರೆ ಅನುಭವಿ ರಾಜಕಾರಣಿ ಜಗದೀಶ್​ ಶೆಟ್ಟರ್​ ಅವರ ವಿರುದ್ಧ ಸೋಲು ಕಂಡಿದ್ದಾರೆ.
ಬೀದರ್​ ಲೋಕಸಭಾ ಕ್ಷೇತ್ರದಲ್ಲಿ 1991ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಹಿಡಿತ ಸಾಧಿಸಿಕೊಂಡು ಬಂದಿದೆ. ಹೀಗಾಗಿ ಈ ಬಾರಿ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಮೂಲಕ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲುವ ಕನಸು ಕಂಡಿತ್ತು. ಈ ಕನಸು ನನಸಾಗಿದ್ದು, ಸಾಗರ ಖಂಡ್ರೆ ಅವರು ವಿಜಯಶಾಲಿಯಾಗಿದ್ದಾರೆ.

2023 ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತಗಳಿಂದ ಸೋತಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ಸೌಮ್ಯಾ ರೆಡ್ಡಿ ಅವರು ಸೋಲುಂಡಿದ್ದಾರೆ.


Spread the love

About Laxminews 24x7

Check Also

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

Spread the love ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ