Breaking News

ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : 17 ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

Spread the love

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

BREAKING : ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : 17 ಜಿಲ್ಲೆಗಳಿಗೆ ʻಯೆಲ್ಲೋ ಅಲರ್ಟ್‌ʼ ಘೋಷಣೆ

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕೆಲವೆಡೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ