ಹುಬ್ಬಳ್ಳಿ, ಜೂನ್ 05: ಬೆಳಗಾವಿಗೆ ನಾನು ವಲಸಿಗ, ಹೊರಗಿನವನು ಎಂದು ಟೀಕಿಸಿದವರಿಗೆ ಜನರೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಇದೀಗ 1ಲಕ್ಷ 80 ಸಾವಿರ ಅಂತರದಿಂದ ಜಯಗಳಿಸಿದ್ದೇವೆ. ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ದೇವರ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ನಾನು ಭಾರೀ ಅಂತರದಿಂದ ಗೆದ್ದಿದ್ದು, ಇದಕ್ಕೆ ಸ್ಥಳೀಯ ನಾಯಕರು, ಕಾರ್ಯಕರ್ತರು ಸಹಕಾರ ಕಾರಣ. ಅವರಿಂದ ನನಗೆ ಗೆಲುವು ಸಿಕ್ಕಿದೆ. ನಾನು ಹೊರಗಿನವನು ಎಂದವರಿಗೆ ಜನರೇ ಜನರು ಉತ್ತರ ಕೊಟ್ಟಿದ್ದಾರೆ. ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ ಎಂದ ಅವರು, ಹೈಕಮಾಂಡ್ ಯಾವುದೇ ಜವಾಬ್ದಾರಿ ಕೊಟ್ಟರು ನಿಭಾಯಿಸುವಂತೆ ಎಂದು ಅವರು ಹೇಳಿದರು.