ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಣುತ್ತಿದೆ. ಹೀಗೆ ‘ಕನಕಪುರ ಬಂಡೆ’ ಎಂಬ ಹವಾ ಇಟ್ಟಿರುವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಮೂಡಿದೆ ಎಂಬ ಆರೋಪ ಕೇಳಿಬರುತ್ತಿದೆ.
ಇದೇ ಕಾರಣಕ್ಕೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಕೆಳಗೆ ಇಳಿಸಲು ಎಲ್ಲಾ ಸಿದ್ಧತೆ ಸಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ 2024ರಲ್ಲಿ ಅಂದುಕೊಂಡ ರೀತಿ ಗೆಲುವು ಸಾಧಿಸಿಲ್ಲ. ಕರ್ನಾಟಕದಲ್ಲಿ 2023ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿತ್ತು. 130ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಪಕ್ಷ ಹೊಸ ಇತಿಹಾಸ ಬರೆದಿತ್ತು. ಹೀಗಿದ್ದಾಗಲೇ, ಕಾಂಗ್ರೆಸ್ ಪಕ್ಷ 2024ರ ಲೋಕಸಭೆ ಚುನಾವಣೆ ಅಖಾಡದಲ್ಲಿ ಹೀನಾಯ ಸೋಲು ಕಂಡಿದೆ.
20ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲ್ಲುವ…
2024ರ ಲೋಕಸಭೆ ಚುನಾವಣೆ ಘೋಷಣೆಗೆ ಮೊದಲು ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಹುರುಪು ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೊನೆಗೆ ಸಿಕ್ಕಿದ್ದು ಕೇವಲ 9 ಸ್ಥಾನ. ಇದೇ ಕಾರಣಕ್ಕೆ ಈಗ ಡಿ.ಕೆ. ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪಟ್ಟ ಅಲುಗಾಡಲು ಶುರುವಾಗಿದೆ ಎಂಬ ಮಾತುಗಳು ಓಡಾಡುತ್ತಿವೆ. ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ರಾಜೀನಾಮೆಯ ಕೊಡಲಿದ್ದಾರಾ? ಬನ್ನಿ ತಿಳಿಯೋಣ.
ಡಿಕೆಶಿ ಸಿಎಂ ಆಗ್ತಾರೆ ಎಂದಿದ್ದರು!
2024ರ ಲೋಕಸಭೆ ಚುನಾವಣೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಸಿಎಂ ಆಗಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಪಟ್ಟ ಕಟ್ಟಲು ಸರ್ವ ಸಿದ್ಧತೆ ಸಾಗಿದ್ದು, ಕ್ಷಣಗಣನೆ ಆರಂಭ ಆಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇದೀಗ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಹೀಗಿದ್ದಾಗ ಡಿ.ಕೆ. ಶಿವಕುಮಾರ್ ಅವರ ನೇತೃತ್ವ ದಲ್ಲಿ ಚುನಾವಣೆ ಎದುರಿಸಿದ್ದ ಕರ್ನಾಟಕ ಕಾಂಗ್ರೆಸ್ ಭಾರಿ ಹಿನ್ನಡೆ ಕಂಡಿದೆ. ಹೀಗಾಗಿಯೇ, ಡಿಕೆಶಿ ಅವರನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸೋದು ಫಿಕ್ಸ್? ಎಂಬ ಚರ್ಚೆ ಶುರುವಾಗಿದೆ.