Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ | ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

ಬೆಳಗಾವಿ | ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

Spread the love

ಬೈಲಹೊಂಗಲ: ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಗುರುವಾರ ಧಾರಾಕಾರ ಮಳೆ ಸುರಿಯಿತು. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಬಿರುಸಿನ ಮಳೆ ಬಿದ್ದು, ಪಟ್ಟಣದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತು.

ಹೊಸೂರ ರಸ್ತೆಯ ವಿಜಯ ಸೋಸಿಯಲ್ ಕ್ಲಬ್, ಪೊಲೀಸ್ ಠಾಣೆ, ಬಸ್ ನಿಲ್ದಾಣ ಮುಖ್ಯ ರಸ್ತೆಗಳು ಮಳೆ ನೀರಿನಿಂದಾಗಿ ಕೆರೆಯಂತೆ ಕಂಡವು.

ಕಾರ್‌, ಬೈಕ್‌ ಸವಾರರು ಸಂಚಾರಕ್ಕೆ ಪರದಾಡುವಂತಾಯಿತು.

ಈಟಿ ಬಸವೇಶ್ವರ ದೇವಸ್ಥಾನ ಹತ್ತಿರದ ಎಂ.ಜೆ. ಹೌಸಿಂಗ್ ಕಾಲೊನಿಯಲ್ಲು ಬಿರುಗಾಳಿ- ಮಳೆ ಬಂದಿತು. ಇಲ್ಲಿ ಡಾಂಬರ್‌ ಅಥವಾ ಸಿಮೆಂಟ್‌ ರಸ್ತೆಗಳು ಇಲ್ಲದ ಕಾರಣ ಇಡೀ ಕಾಲೊನಿ ಕೆಸರುಮಯವಾಯಿತು.

ಇಂಚಲ ಕ್ರಾಸ್‌ನಲ್ಲಿ ಗಟಾರುಗಳು ತುಂಬಿ ಹರಿದಿದ್ದರಿಂದ ತಾಲ್ಲೂಕು ಕೇಂದ್ರ ಬಸ್ ನಿಲ್ದಾಣ, ರಾಯಣ್ಣ ವೃತ್ತದ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ನೀರು ತುಂಬಿ ಹರಿಯಿತು. ಬಜಾರ ರಸ್ತೆಯ ಗಣಾಚಾರಿ ಮಳಿಗೆ ಹಿಂಬದಿಯ ಗಟಾರಗಳು ತುಂಬಿ ತ್ಯಾಜ್ಯ ಸಮೇತ ಮುಖ್ಯ ರಸ್ತೆ ಮೇಲೆ ಹರಿಯಿತು. ಇದರಿಂದಾಗಿ ಬಜಾರ ರಸ್ತೆ ಕೆಲಕಾಲ ದುರ್ವಾಸನೆಯಿಂದ ಕೂಡಿತ್ತು.


Spread the love

About Laxminews 24x7

Check Also

ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು

Spread the love ಬೆಳಗಾವಿ: ಕರ್ನಾಟಕದ ಗಡಿಭಾಗದಲ್ಲಿ ರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಮಹಾರಾಷ್ಟ್ರ ಸರಕಾರವು ಸದ್ದಿಲ್ಲದೆ ಇನ್ನೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ