Breaking News

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಜೂನ್ 10 ರವರೆಗೆ ವಿಸ್ತರಣೆ

Spread the love

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಆರೋಪಿಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಜೂನ್ 10 ರವರೆಗೆ ವಿಸ್ತರಣೆ

ಎಸ್‌ಐಟಿ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ಎಸಿಎಂಎಂ 42ನೇ ನ್ಯಾಯಾಲಯದ ನಾಯಾಧೀಶ ಕೆ.ಎಂ. ಶಿವಕುಮಾರ್ ಅವರು ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಅವಧಿಯನ್ನು ಜೂನ್ 10 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆ ಹಾಗೂ ಸಿಐಡಿ ಠಾಣೆಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣಗಳ ತನಿಖೆಗೆ ಎಸ್​ಐಟಿ ರಚನೆ ಮಾಡಿ ಆದೇಶ ಮಾಡಿತ್ತು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ