Breaking News

ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು:

Spread the love

ವಿಜಯಪುರ, ಜೂನ್‌ 08: ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮೊದಲೇ ಉತ್ತಮ ಮಳೆಯಾಗುತ್ತಿದ್ದು, ನದಿ ಹಳ್ಳ ಕೊಳ್ಳಗಳ ನೀರಿನ ಮಟ್ಟ ಹೆಚ್ಚಾಗುತ್ತಿದೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.

ಇದರಿಂದಾಗಿ ರೈತರು ಸಂತಸಗೊಂಡಿದ್ದಾರೆ.Almatti Dam: ಭರ್ಜರಿ ಮಳೆ; ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಇಲ್ಲಿದೆ ಮಾಹಿತಿ

ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಶುಕ್ರವಾರದಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ