Breaking News

ವಾಲ್ಮೀಕಿ ಅಭಿವೃದ್ಧಿ ನಿಗಮ’ ಹಗರಣ: ‘ಮೂವರು ಸಚಿವ’ರು ಶಾಮೀಲು?!

Spread the love

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಈ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾಗಿತ್ತು. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಮೂವರು ಸಚಿವರು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ.

 

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ರಾಜ್ಯ ಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ದೊರೆತಿದೆ. ಈ ಹಗರಣವು ಸರ್ಕಾರದ ಬುಡವನ್ನೇ ಅಲುಗಾಡಿಸುವಷ್ಟು ಬ್ರಹ್ಮಂಡವಾಗಿ ಬೆಳೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಬರೋಬ್ಬರಿ 187 ಕೋಟಿ ರೂ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ. ಈಗಾಗಲೇ ನಿಗಮದ ಎಂಡಿ ಸೇರಿದಂತೆ ಹಲವರನ್ನು ಎಸ್‌ಐಟಿ ಬಂಧಿಸಿದೆ. ಇದೇ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಕೂಡ ನೀಡಿದ್ದಾರೆ.

ಇದರ ನಡುವೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಇನ್ನೂ ಕೆಲವು ಸಚಿವರು ಮತ್ತು ಶಾಸಕರು ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ. ಈ ಹಗರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಬಿಸಬೇಕು ಅಂತ ವಿಪಕ್ಷ ಬಿಜೆಪಿ ಒತ್ತಾಯಿಸಿದೆ.

ಮೇ.24ರಂದು ಅಧಿಕಾರಿ ಪರುಶುರಾಮ್ ವಿಧಾನಸೌಧದ 3ನೇ ಮಹಡಿಯಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಕೊಠಡಿಯಲ್ಲಿ ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೂ ಸಭೆ ನಡೆಸಿದ್ದು, ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಹಾಗೂ ದಾಖಲಾತಿಗಳನ್ನು ನಾಶಪಡಿಸುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಇದಲ್ಲದೇ ಈ ಸಭೆಯಲ್ಲಿ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಸೇರಿದಂತೆ ಹಲವರು ಉಪಸ್ಥಿತರಾಗಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹೆಸರು ಕೂಡ ಕೇಳಿ ಬರುತ್ತಿದೆ. ಇದೇ ಕಾರಣಕ್ಕೆ ಇವರಿಬ್ಬರ ರಾಜೀನಾಮೆಗೂ ಬಿಜೆಪಿ ಆಗ್ರಹಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬ್ಯಾಂಕ್ ನ ಮೂಲ ಖಾತೆಯಿಂದ ಉಪ ಖಾತೆಗೆ ವರ್ಗಾವಣಗೊಂಡು, ಅಲ್ಲಿಂದ ತೆಲಂಗಾಣದ ಹಲವು ಕಂಪನಿಗಳಿಗೆ ಹಂಚಿಕೆಯಾಗಿದೆ. ಈ ಹಣವನ್ನು ಲೋಕಸಭಾ ಚುನಾವಣೆಗಾಗಿಯೇ ಬಳಕೆ ಮಾಡಲಾಗಿದೆ ಎಂಬ ಅನುಮಾನಗಳನ್ನು ಪ್ರತಿಪಕ್ಷ ಬಿಜೆಪಿ ವ್ಯಕ್ತ ಪಡಿಸಿದೆ. ತೆಲಂಗಾಣದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಎನ್ ಎಸ್ ಬೋಸರಾಜ್ ಅವರ ರಾಜೀನಾಮೆಗೂ ಇದೇ ಕಾರಣಕ್ಕೆ ಒತ್ತಾಯ ಕೇಳಿ ಬಂದಿದೆ.


Spread the love

About Laxminews 24x7

Check Also

ಶ್ರೀರಾಮುಲುಗೂ ವಿಜಯೇಂದ್ರ ಮುಂದುವರಿಯುವುದು ಬೇಕಿಲ್ಲ, ಅದನ್ನು ಚಾಣಾಕ್ಷತೆಯಿಂದ ಹೇಳುತ್ತಾರೆ!

Spread the loveಕೋಲಾರ: ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರಿಗೂ ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದು ಬೇಕಿಲ್ಲ, ಅದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ