Breaking News

ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಮಂತ್ರಿಗಿರಿ ಫಿಕ್ಸ್‌ : ಕೃಷಿ ಇಲಾಖೆ ಮೇಲೆ ಕಣ್ಣಿಟ್ಟ ʻHDKʼ!

Spread the love

ವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ನೂತನ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತವಾಗಿದ್ದು, ಅವರು ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮೇಲೆ ಬಿಟ್ಟಿದ್ದೇನೆ.BREAKING : ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಮಂತ್ರಿಗಿರಿ ಫಿಕ್ಸ್‌ : ಕೃಷಿ ಇಲಾಖೆ ಮೇಲೆ ಕಣ್ಣಿಟ್ಟ ʻHDKʼ!

ನನಗೆ ಕೃಷಿಗೆ ಸಂಬಂಧ ಪಟ್ಟಂತೆ ಮೊದಲಿನಿಂದಲೇ ಆಸಕ್ತಿ ಇದೆ. ಮೋದಿ ಅವರು ನನ್ನ ಮೇಲೆ ಮತ್ತು ನನ್ನ ತಂದೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರು ನನಗೆ ಕೃಷಿ ಖಾತೆ ಕೊಡುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಅಂತಹ ಇಲಾಖೆ ಸಿಕ್ಕರೆ ಖಂಡತವಾಗಿ ಒಳ್ಳೆಯ ಕೆಲಸ ಮಾಡುತ್ತೇನೆ. ಜನರ ಮಧ್ಯೆ ಇರಬೇಕು ಅಂತ ಕೆಲಸ ಮಾಡುತ್ತೇನೆ ಎಂದರು.

ಮೋದಿ 3.0 ಸಂಪುಟದ ಭಾಗವಾಗಿ 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ವರದಿಯ ಪ್ರಕಾರ, ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ‘ಸುಮಾರು 30 ಸಚಿವರು’ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ ನಂತರ, ಗೃಹ, ರಕ್ಷಣಾ, ಹಣಕಾಸು, ವಿದೇಶಾಂಗ ವ್ಯವಹಾರಗಳು ಮತ್ತು ನಾಗರಿಕ ವಿಮಾನಯಾನ ಸೇರಿದಂತೆ ಪ್ರಮುಖ ಖಾತೆಗಳನ್ನು ಹಂಚಿಕೆ ಮಾಡುವ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ