Breaking News

ಮೋದಿ ಸರ್ಕಾರ 15 ದಿನ ಇರುತ್ತೋ.. ಇಲ್ವೋ- ಮಮತಾ ಬ್ಯಾನರ್ಜಿ

Spread the love

ಕೋಲ್ಕತ್ತಾ: ಮೋದಿ ಮೂರನೇ ಬಾರಿಗೆ ಪ್ರಮಾಣ ವಚನಕ್ಕೂ ಮುನ್ನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಕೌಂಟರ್ ಕೊಟ್ಟಿದ್ದಾರೆ.

ಕೆಲವೊಮ್ಮೆ ಸರ್ಕಾರಗಳು ಒಂದು ದಿನ ಮಾತ್ರ ಇರುತ್ತವೆ. ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳ ಗೆಲುವಿನ ಬಗ್ಗೆ ಮಾತನಾಡುವವರಿಗೆ ಸ್ವಂತವಾಗಿ ಸರಳ ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ.

ಏನು ಬೇಕಾದರೂ ಆಗಬಹುದು. ಎನ್‍ಡಿಎ ಸರ್ಕಾರ 15 ದಿನವಾದರೂ ಇರುತ್ತದೋ ಇಲ್ವೋ ಯಾರಿಗೆ ಗೊತ್ತು ಎಂದು ಟಿಎಂಸಿ ನಾಯಕಿ ಮಮತಾ ವ್ಯಂಗ್ಯವಾಡಿದ್ದಾರೆ.Mamata banerjee: ಮೋದಿ ಸರ್ಕಾರ 15 ದಿನ ಇರುತ್ತೋ.. ಇಲ್ವೋ- ಮಮತಾ ಬ್ಯಾನರ್ಜಿ

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಮಗೆ ಆಹ್ವಾನ ಬಂದಿಲ್ಲ. ನಾವು ಹೋಗುದಿಲ್ಲ. ಇಂದು ನಡೆಯುತ್ತಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಕಾನೂನುಬಾಹಿರವಾಗಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಸರ್ಕಾರ ರಚಿಸುತ್ತಿರುವ ಕಾರಣದಿಂದ ನಾವು ಅವರಿಗೆ ಶುಭಾಶಯಗಳನ್ನು ಕೋರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ 22 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ ಸಂಖ್ಯೆ 18ರಿಂದ 12ಕ್ಕೆ ಇಳಿದಿದೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ