Breaking News

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ,

Spread the love

ಮೈಸೂರು, ಜೂನ್.09: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ವಂಚನೆ (Cheat) ಮಾಡಿರುವ ಆರೋಪ ಮೈಸೂರಿನ (Mysuru) ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಕೇಳಿ ಬಂದಿದೆ. 25 ವರ್ಷದ ಯುವಕ 34 ವರ್ಷದ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ. ಮಹಿಳೆ ಗರ್ಭಿಣಿಯಾಗಿದ್ದು ಯುವಕ ನಾಪತ್ತೆಯಾಗಿದ್ದಾನೆ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ತೆ 2018ರಲ್ಲಿ ಪತಿಯಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕು ಕಟ್ಟಿಕೊಂಡಿದ್ದಳು. ಸಿಂಗಿಂಗ್ ಇವೆಂಟ್​ಗೆ ಹಾಡು ಹೇಳಲು ಹೋಗ್ತಿದ್ದಾಗ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ್​ ಎಂಬಾತನ ಪರಿಚಯವಾಗುತ್ತೆ. ಈ ಪರಿಚಯ ಪರಸ್ಪರಲ್ಲಿ ಉತ್ತಮ ಸ್ನೇಹಕ್ಕೆ ತಿರುಗತ್ತೆ. ಹರೀಶ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸಂತ್ರಸ್ತೆ ಹಾಗೂ ಹರೀಶ್ ಇಬ್ಬರೂ ಹವ್ಯಾಸಿ ಹಾಡುಗಾರರಾಗಿದ್ದ ಕಾರಣ ಆಗಾಗ ಭೇಟಿಯಾಗುತ್ತಿದ್ದರು.

ಟೀಚರಮ್ಮನ ಮನೆಗೆ ಹರೀಶ್ ಆಗಾಗ ಬಂದು ಹೋಗುತ್ತಿದ್ದ. ಒಮ್ಮೆ ನನಗೆ ಮದ್ಯ ಕುಡಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈಗ ಮಹಿಳೆ ಗರ್ಭಿಣಿಯಾಗಿದ್ದು ಆರೋಪಿ ಹರೀಶ್ ಪರಾರಿಯಾಗಿದ್ದಾನೆ. ಅಲ್ಲದೆ ಆರೋಪಿ ಹರೀಶ್ ಸಂಬಂಧಿ ಕೊಳ್ಳೇಗಾಲದಲ್ಲಿ ಸ್ಟಾಫ್ ನರ್ಸ್ ಆಗಿದ್ದಾನೆ. ಅವನ ಸಹಾಯದಿಂದ ಗರ್ಭಪಾತದ ಮಾತ್ರೆಗಳನ್ನು ತರಸಿ ನನಗೆ ನೀಡಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಇನ್ನು ಆರೋಪಿ ಹರೀಶನ ಮನೆಯವರು ಮದುವೆಗೆ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ

ಒಂದೇ ಕುಟುಂಬದ ನಾಲ್ವರು ಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಓರ್ವ ಸಾವನ್ನಪ್ಪಿ ಮೂವರು ಅಸ್ವಸ್ಥಗೊಂಡಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಮಹದೇವನಾಯಕ ಮೃತಪಟ್ಟಿದ್ದು, ಆತನ ಪತ್ನಿ ಗೌರಮ್ಮ, ಮಗಳು ಲೀಲಾವತಿ, ರಿಷಿತಾ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ