ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶ ಕಾಂಗ್ರೆಸ್ಸಿನ ಕೆಲ ನಾಯಕರಲ್ಲಿ ಖುಷಿ ತಂದಿದ್ದರೆ ಇನ್ನೂ ಅನೇಕರಲ್ಲಿ ನೋವುಂಟು ಮಾಡಿದೆ. ಈ ಮಧ್ಯೆ ಬೆಳಗಾವಿಯಿಂದ ತಮ್ಮ ಪುತ್ರನನ್ನು ಕಣಕ್ಕೆ ಇಳಿಸಿದ್ದ ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿರುವ ವೀಡಿಯೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹೌದು ಚುನಾವಣಾ ಫಲಿತಾಂಶದ ನಂತರ ಬೆಂಗಳೂರಿಗೆ ತೆರಳಿರುವ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ತಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದೆ. ಈ ಸಂದರ್ಭದಲ್ಲಿ ಸಿಎಂ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮೋಡುತ್ತಿದ್ದಂತೆ ಸ್ವಾರಿ ಎಂದು ಕೇಳಿದ್ದು ಸಧ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಸಿಎಂ ಭೇಟಿಗೆ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು ಸೇರಿದ್ದರು. ಈ ಸಂದರ್ಭದಲ್ಲಿ ಸಿಎಂ ಆಗಮಿಸುತ್ತಿದ್ದಂತೆ ಏನು ಬೆಳಗಾವಿಯವರು ಇಲ್ಲೇ ಇದ್ದೀರಾ ಎಂದರು….ಹಾಗೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಕಡೆಗೆ ನೋಡಿದ ಸಿಎಂ ಸ್ವಾರಿ ಅಮ್ಮ ಎಂದರು.