ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಶ್ರವಣ್ (25) ಎಂದು ಗುರುತಿಸಲಾಗಿದೆ. ಫಾಲ್ಸ್ ನಲ್ಲಿ ಸೆಲ್ಪಿ ತೆಗೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ.

ಪರಿಣಾಮ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Laxmi News 24×7