ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸ್ಜಿವಕುಮಾರ್, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು.
ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ ದಿನಾಂಕ ನಿಗದಿ ಮಾಡಲಾಗುವುದು. ಇಂದು ಬೆಂಗಳೂರಿನ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು ಎಂದರು.
`