Breaking News

‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆಗೆ ‘ಸಿಎಂ ಸಿದ್ಧರಾಮಯ್ಯ’ ಈ ಮಾನದಂಡ ಫಿಕ್ಸ್

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಸಿದ್ಧರಾಮಯ್ಯ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಅದೇ ನೌಕರರ ವರ್ಗಾವಣೆ ನಾನು ಬೇರೆ ಯಾವುದಕ್ಕೂ ಮಣೆ ಹಾಕೋದಿಲಲ್. ಆ ಮಾನದಂತ ಪೂರೈಸಿದ್ರೆ ಮಾತ್ರವೇ ವರ್ಗಾವಣೆ ಅನುಮತಿಸೋದಾಗಿ ಎಚ್ಚರಿಸಿದ್ದಾರೆ.

ಇಂದು ಸಿಎಂ ಸಿದ್ಧರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.'ರಾಜ್ಯ ಸರ್ಕಾರಿ ನೌಕರ'ರ ವರ್ಗಾವಣೆಗೆ 'ಸಿಎಂ ಸಿದ್ಧರಾಮಯ್ಯ' ಈ ಮಾನದಂಡ ಫಿಕ್ಸ್

ಈ ಸಭೆಯಲ್ಲಿ ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಉದ್ಯಾನ ಕಾಮಗಾರಿಗೆ ಭೂಮಿ ಪೂಜೆ

Spread the love ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ