Breaking News

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

Spread the love

ಬೆಂಗಳೂರು: ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ರಾಜ್ಯದಲ್ಲಿಬರ, ನೆರೆ ಹಾಗೂ ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ರಚನೆಯಾಗಿರುವ ಸಚಿವ ಸಂಪುಟ ಉಪಸಮಿತಿಯ ಸಭೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು.

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲಾಗುತ್ತಿದ್ದು, ರೈತರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಪರಿಹಾರ ವಿತರಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರಕಾರದಿಂದ ಎನ್‌ಡಿಆರ್‌ಎಫ್‌ ಪರಿಹಾರವಾಗಿ 3,454 ಕೋಟಿ ರೂ. ರಾಜ್ಯಕ್ಕೆ ಬಂದಿತ್ತು. ಅದರಂತೆ 27.50 ಲಕ್ಷ ರೈತರಿಗೆ 2,451 ಕೋಟಿ ರೂ. ಪರಿಹಾರವನ್ನು ಮೇ ತಿಂಗಳU ಮೊದಲ ವಾರದಲ್ಲೇ ವಿತರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಉಳಿದ ಹಣ ಮತ್ತು ರಾಜ್ಯ ಸರಕಾರದಿಂದ 272 ಕೋಟಿ ರೂ. ಸೇರಿಸಿ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ವಾರದೊಳಗೆ ಪರಿಹಾರ ಪಾವತಿಸಲು ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆಂದು ತಿಳಿಸಿದರು.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ