ಹುಬ್ಬಳ್ಳಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು.
ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು.
ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಯುವ ಘಟಕದ ಅಧ್ಯಕ್ಷ ನಿರಂಜನಯ್ಯ ಹಿರೇಮಠ, ಆಟೊ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮೊದಲಾದವರಿದ್ದರು.
ಸಮತಾ ಸೇನಾ, ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ ಖಂಡನೆ: ‘ಹುಬ್ಬಳ್ಳಿಯಲ್ಲಿ ನೇಹಾ ಮತ್ತು ಅಂಜಲಿ ಹತ್ಯೆ ನಡೆದಾಗ ಬೀದಿಗಿಳಿದು ಬೊಬ್ಬೆ ಹೊಡೆದ ಹಿಂದೂ ಸಂಘಟನೆಯರು ಈಗ ಎಲ್ಲಿ ಕಾಣೆಯಾದರು’ ಎಂದು ಸಮತಾ ಸೇನಾ, ವಿವಿಧ ದಲಿತ ಸಂಘ- ಸಂಸ್ಥೆಗಳ ಮಹಾಮಂಡಳ ಪ್ರಶ್ನಿಸಿದೆ.