ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ನಟ ದರ್ಶನ್ ಸ್ನೇಹಿತ ಹಾಗೂ ಅವರೊಂದಿಗೆ ಕೆಲ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ, ಪ್ರದೋಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ ಎನ್ನಲಾಗಿದ್ದು, ದರ್ಶನ್ ಜೊತೆಗೆ ಸ್ನೇಹವನ್ನು ಹೊಂದಿದ್ದ ಎನ್ನಲಾಗಿದೆ