Breaking News

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಜನತಾದರ್ಶನ’ಕ್ಕೆ ಮರು ಚಾಲನೆ

Spread the love

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ.

ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ರಾಜ್ಯದ ಜನತೆಗೆ ಗುಡ್ ನ್ಯೂಸ್: 'ಜನತಾದರ್ಶನ'ಕ್ಕೆ ಮರು ಚಾಲನೆ

ಜಿಲ್ಲಾಮಟ್ಟದಲ್ಲೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಜನತಾದರ್ಶನವನ್ನು ಮತ್ತೆ ಆರಂಭಿಸಬೇಕು. ಜನರ ಬೇಡಿಕೆಗಳು, ಅಹವಾಲುಗಳನ್ನು ಸ್ವೀಕರಿಸಿ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಆಡಳಿತವನ್ನು ಜನಪರವಾಗಿಸಲು ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಮುಖ್ಯಮಂತ್ರಿಗಳು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ