ಮೂಡಲಗಿ: ‘ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ಮೂಡಲಗಿಯ ಸಿಪಿಐ ಅಬ್ದುಲ್ ವಾಜೀದ್ ಪಟೇಲ್ ಹೇಳಿದರು.
ಮೂಡಲಗಿಯ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ಮೂಡಲಗಿಯು ಸಾಮರಸ್ಯಕ್ಕೆ ಹೆಸರಾಗಿದೆ.
ಅಂಥ ಹೆಸರಿಗೆ ಚ್ಯುತಿಯಾಗದಂತೆ ಇರಬೇಕು. ಕಾನೂನು ಪಾಲನೆ ಮಾಡದಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುಗುವುದು ಎಂದರು.
ಪಿಎಸ್‌ಐ ಚಂದ್ರಶೇಖರ ಹೆರಕಲ್ ಮಾತನಾಡಿದರು. ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರಾದ ಲಾಲಸಾಬ್ ಸಿದ್ಧಾಪುರ, ಮಲ್ಲಿಕ ಕಳ್ಳಿಮನಿ ಸಮಾಜದ ಪರವಾಗಿ ಮಾತನಾಡಿದರು. ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.