Breaking News

ರಾಯಚೂರು | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Spread the love

ರಾಯಚೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ಪೊಸ್ಕೊ ನ್ಯಾಯಾಲಯ ಶುಕ್ರವಾರ 20ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

2021ರ ಜನವರಿಯಲ್ಲಿ ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ಆರೋಪಿ ಹುಲ್ಲಪ್ಪ ರಾಮಣ್ಣಗೆ (25) ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಬಿ.ಬಿ.

ಜಕಾತಿ ತೀರ್ಪು ನೀಡಿದ್ದಾರೆ. ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹ 9 ಲಕ್ಷ ಪರಿಹಾರ ಕೊಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಯಚೂರು | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಾಲಾಗಿತ್ತು. ಸಿಪಿಐ ಮಹಾಂತೇಶ ಸಜ್ಜನ ಅವರು ಆರೋಪಿ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವು 20 ಸಾಕ್ಷಿಗಳ ಪೈಕಿ 17 ಸಾಕ್ಷಿದಾರರ ವಿಚಾರಣೆ ನಡೆಸಿತ್ತು. ಕಾನ್‌ಸ್ಟೆಬಲ್‌ಗಳಾದ ಬಸವರಾಜ, ಮಲ್ಲಪ್ಪ ಪೂಜಾರಿ ಮತ್ತು ವೀರೇಶ ತನಿಖೆಯಲ್ಲಿ ಸಹಕರಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ. ಮಂಜುನಾಥ ವಾದ ಮಂಡಿಸಿದ್ದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ