ಕಾರವಾರ, ಜೂನ್ 15: ಪಿಎಸ್ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು.
ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್ ಅವರಿಗೆ ಪಿಎಸ್ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.