Breaking News

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

Spread the love

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.

ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು, ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ ಸಿ, ಎಸ್ ಟಿಗಳಿಗೆ ಅನ್ಯಾಯ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಕಳೆದ ವರ್ಷ 11 ಸಾವಿರ ಕೋಟಿ ಬಳಸಿದ್ದು, ಈ ವರ್ಷ 14 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದೆ. ಎಸ್ ಸಿ, ಎಸ್ ಟಿಗಳಿಗೆ ಮೀಸಲಿಟ್ಟ 25, ಸಾವಿರ ಕೋಟಿ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ