Breaking News

ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ

Spread the love

ಬೆಂಗಳೂರು: ನಟ ಯುವ ಯುವರಾಜ್‌ ಕುಮಾರ್‌ ವಿಚ್ಚೇದನ ನೋಟಿಸ್‌ ನೀಡಿದ ಬಳಿಕ ಪತ್ನಿ ಶ್ರೀದೇವಿ ಭೈರಪ್ಪ ಅವರು, ‘ನನ್ನ ಪತಿಗೆ ಸಪ್ತಮಿ ಗೌಡ ಅವರೊಂದಿಗೆ ಅನೈತಿಕ ಸಂಬಂಧ ಇದೆ’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಕುರಿತು ನಟಿ ಸಪ್ತಮಿ ಅವರು ಕೋರ್ಟ್ ಮೆಟ್ಟಿಲೇರಿ ನಿರ್ಬಂಧಕಾಜ್ಞೆ ತರಿಸಿದ್ದಾರೆ.

 

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಸಪ್ತಮಿ ಗೌಡ ದಾವೆ ಹೂಡಿ, ‘ಅವರ ವಿಚ್ಚೇದನ ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕಲಾಗುತ್ತಿದೆ. ಚಾರಿತ್ರ್ಯ ಹರಣ ಮಾಡಲಾಗುತ್ತಿದೆ’ ಎಂದು ಹೇಳಿಕೊಂಡಿದ್ದರು.

ಮಾನ ಹಾನಿಕರ ಹೇಳಿಕೆಗಳನ್ನು ನೀಡದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧಕಾಜ್ಞೆ ಹೊರಡಿಸಿ ಶ್ರೀದೇವಿ ಭೈರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಸಪ್ತಮಿ ಗೌಡ ಅವರೊಂದಿಗೆ ಯುವ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. 2023 ರ ಡಿಸೆಂಬರ್‌ ನಲ್ಲಿ ನಾನು ಭಾರತಕ್ಕೆ ಬಂದಾಗ ಸಪ್ತಮಿ ಗೌಡ ಅವರೊಂದಿಗೆ ಹೊಟೇಲ್‌ ರೂಮ್‌ ವೊಂದರಲ್ಲಿ ಯುವ ಸಿಕ್ಕಿಬಿದ್ದಿದ್ದರು. ಇದೇ ಕಾರಣದಿಂದ ನನ್ನನ್ನು ಮನೆಯಿಂದ ಹೊರಹಾಕಲು ಯತ್ನಿಸಿದ್ದರು ಎಂದು ಶ್ರೀದೇವಿ ಆರೋಪಿಸಿದ್ದರು

ಸಪ್ತಮಿ ಗೌಡ ಅವರೊಂದಿಗೆ ಸಂಬಂಧವನ್ನು ಇಟ್ಟುಕೊಂಡು, ಈಗ ನನ್ನ ಮೇಲೆಯೇ ಮೋಸ ವಂಚನೆಯ ಆರೋಪವನ್ನು ಮಾಡಿ ತನ್ನ ಜವಾಬ್ದಾರಿಯಿಂದ ಹೊರ ನಡೆಯಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಪಶ್ಚಾತ್ತಾಪವಿಲ್ಲದೆ ನನ್ನ ವಿರುದ್ಧ ಈ ಸುಳ್ಳು ಮತ್ತು ನಿಷ್ಪ್ರಯೋಜಕ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ನೋಟಿಸ್‌ ನಲ್ಲಿ ಶ್ರೀದೇವಿ ಭೈರಪ್ಪ ಹೇಳಿದ್ದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ