Breaking News

ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ

Spread the love

ಮುಂಬೈ: ಏಪ್ರಿಲ್‌ನಲ್ಲಿ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜಸ್ಥಾನದ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಸಲ್ಮಾನ್ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ: ಹೊಸ ಪ್ರಕರಣ ದಾಖಲಿಸಿದ ಮುಂಬೈ ಪೊಲೀಸರು; ರಾಜಸ್ಥಾನದಲ್ಲಿ ಓರ್ವನ ಬಂಧನ

ಆರೋಪಿಯನ್ನು ರಾಜಸ್ಥಾನದ ಬುಂದಿ ಮೂಲದ ಬನ್ವಾರಿಲಾಲ್ ಲಾತುರ್‌ಲಾಲ್ ಗುಜಾರ್ (25) ಎಂದು ಗುರುತಿಸಲಾಗಿದೆ ಎಂದು ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ಗುರ್ಜರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ ‘ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ಮತ್ತು ಇತರ ಗ್ಯಾಂಗ್ ಸದಸ್ಯರು ನನ್ನೊಂದಿಗಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರು ಇನ್ನೂ ಕ್ಷಮೆ ಕೇಳದ ಕಾರಣ ನಾನು ಅವರನ್ನು ಕೊಲ್ಲಲಿದ್ದೇನೆ’ ಎಂದು ಹೇಳಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯು ರಾಜಸ್ಥಾನದ ಹೆದ್ದಾರಿಯೊಂದರಲ್ಲಿ ವಿಡಿಯೋ ಮಾಡಿ ತನ್ನ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ