Breaking News

ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

Spread the love

ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

ಬೆಂಗಳೂರು: ರಾಜ್ಯದ ಘಟಾನುಘಟಿ ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿರುವ ಘಟನೆ ನಡೆದಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

BIG NEWS: ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

ಇದೇ ವೇಳೆ ಮೈಸೂರಿನ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಕೂಡ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಇದೇ ಸಂದರ್ಭದಲ್ಲಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನೂ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರುಪಡಿಸಲಾಗಿದೆ. ಈ ಮೂಲಕ ಮಾಜಿ ಸಿಎಂ, ಮಾಜಿ ಸಚಿವ, ಮಾಜಿ ಸಂಸದ ಮೂವರು ಒಂದೇ ಬಾರಿಗೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ