Breaking News

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Spread the love

ದಗ: ಡೀಸೆಲ್‌, ಪೆಟ್ರೋಲ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಮಹಿಳೆಯರು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ವಾಹನ ಸವಾರರ ಮೇಲೆ ಬರೆ ಎಳೆದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನಸಾಮಾನ್ಯರಿಗೆ ಹೊರೆಯಾದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಲಾಯಿತು.

ಎತ್ತಿನ ಗಾಡಿ ಮೇಲೆ ಬೈಕ್ ಇಟ್ಟು, ಕಾರಿಗೆ ಹಗ್ಗ ಕಟ್ಟಿಕೊಂಡು ಸರ್ಕಲ್ ಸುತ್ತಲೂ ರೌಂಡ್ ಹಾಕಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ, ಕಾರ್ಯಕರ್ತರು, ಮುಖಂಡರು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ, ಬಾಯಿ ಬಡಿದುಕೊಳ್ಳುತ್ತ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ