Breaking News
Home / Uncategorized / ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಜು.15 ರಿಂದ ಆರಂಭ

ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಜು.15 ರಿಂದ ಆರಂಭ

Spread the love

ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಜುಲೈ 15 ರಿಂದ ನಡೆಯುವ ಸಾಧ್ಯತೆಗಳಿವೆ. ಜುಲೈ 15 ರಿಂದ 10 ದಿನ ಅಧಿವೇಶನ ನಡೆಸಲು ವಿಧಾನಸಭಾಧ್ಯಕ್ಷರ ಕಚೇರಿಯಲ್ಲಿ ಪೂರ್ವ ಸಿದ್ಧತೆಗಳು ನಡೆಯುತ್ತಿವೆ.

ಕೆಂಗಲ್ ಗೇಟ್ ನಿಂದ ವಿಧಾನಸಭೆ ಸಭಾಂಗಣ ಪ್ರವೇಶಿಸುವ ಮುಖ್ಯ ದ್ವಾರವನ್ನು ರೋಜ್ ವುಡ್‌ನಿಂದ ನಿರ್ಮಿಸಲಾಗಿದ್ದು, ಅಧಿವೇಶನದ ವೇಳೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ದ್ವಾರವನ್ನು ಉದ್ಘಾಟಿಸಲಿದ್ದಾರೆ.

ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಜು.15 ರಿಂದ ಆರಂಭ

ಉತ್ತಮ ವಾತಾವರಣಕ್ಕೆ ಒತ್ತು

ಈ ಬಾರಿ ವಿಧಾನಸಭೆ ಅಧಿವೇಶನ ನಡೆಯುವ ಹಾಗೂ ವಿಧಾನಸೌಧದ ವಾತಾವರಣದ ಅಚ್ಚುಕಟ್ಟಿಗೆ ಆದ್ಯತೆ ನೀಡಲಾಗುತ್ತಿದೆ. ಒಳಾಂಗಣ ಮಾತ್ರವಲ್ಲದೆ, ಹೊರಾಂಗಣದ ಶುಚಿತ್ವ, ಶೋಭೆಗೆ ಒತ್ತು ನೀಡಲಾಗುತ್ತದೆ. ಮೊಗಸಾಲೆ ಮತ್ತು ಮೊಗಸಾಲೆ ಪ್ರವೇಶಿಸುವ ಪ್ರದೇಶದಲ್ಲಿ ರೆಡ್ ಕಾರ್ಪೆಟ್ ಹಾಕಲು ವ್ಯವಸ್ಥೆ ಮಾಡಲಾಗಿದೆ.

ಸಮಯಕ್ಕೆ ಸರಿಯಾಗಿ ಹಾಜರಾಗುವವರು, ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವವರನ್ನು ಉತ್ತೇಜಿಸಲು ಕಳೆದ ಬಾರಿ ಕಪ್ ಗ್‌ಟಿ ಕೊಡಲಾಗುತ್ತಿತ್ತು. ಈ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಲಾಂಛನ ಎಂಬೋಜ್ ಮಾಡಿರುವ ಪ್ಲೇಟ್‌ಗಳನ್ನು ಕೊಡಲಾಗುತ್ತದೆ.


Spread the love

About Laxminews 24x7

Check Also

ಪಂಚಾಯತ್‌ಗಳ ಬಲವರ್ಧನೆಗೆ ರಾಜ್ಯ ಸರಕಾರ ಚಿತ್ತ ಹರಿಸಲಿ

Spread the love ರಾಜ್ಯದಲ್ಲಿ ಜುಲೈ ಒಂದರಿಂದ ಅನ್ವಯವಾಗುವಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ