Breaking News

ಪದೇಪದೆ ಖಾಸಗಿ ಅಂಗ ತೋರಿಸಿ, ಅದೇ ಪರೀಕ್ಷೆ ಮಾಡಿಸಿಕೊಳ್ಳಲು ಮುಜುಗರ ವಾಗುತ್ತದೆ.; ಪ್ರಜ್ವಲ್‌ ರೇವಣ್ಣ ಅಲವತ್ತು

Spread the love

ಬೆಂಗಳೂರು: ಈಗಾಗಲೇ ಎರಡು ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆಗೆ ಒಳಪಟ್ಟಿದ್ದೇನೆ. ಪದೇಪದೆ ಅದೇ ಪರೀಕ್ಷೆ ನಡೆಸಲು ನನಗೂ ಮುಜುಗರವಾಗುತ್ತಿದೆ. ನನ್ನನ್ನು ಮುಜುಗರಕ್ಕೀಡು ಮಾಡಲೆಂದೇ ಇದನ್ನು ಮಾಡುತ್ತಿರುವಂತೆ ಕಾಣುತ್ತಿದೆ ಎಂದು ನ್ಯಾಯಾಧೀಶರ ಮುಂದೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅಲವತ್ತುಕೊಂಡಿದ್ದಾರೆ.

Prajwal Revanna ಪದೇಪದೆ ಪುರುಷತ್ವ ಪರೀಕ್ಷೆಯಿಂದ ಮುಜುಗರ; ನ್ಯಾಯಾಧೀಶರ ಮುಂದೆ ಅಲವತ್ತು

ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಅವಧಿ ಮಂಗಳವಾರಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾ ಲಯವು ಪ್ರಜ್ವಲ್‌ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ವಿಚಾರಣೆ ವೇಳೆ ಪ್ರಜ್ವಲ್‌ ನ್ಯಾಯಾಧೀಶರ ಮುಂದೆ ತಮ್ಮ ಅಳಲನ್ನು ತೋಡಿಕೊಂಡ ಪ್ರಸಂಗವೂ ನಡೆಯಿತು.

ಈಗಾಗಲೇ 2 ಪ್ರಕರಣಗಳಲ್ಲಿ ನನ್ನನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಿದ್ದಾರೆ. ಪದೇಪದೆ ಖಾಸಗಿ ಅಂಗ ತೋರಿಸಿ, ಅದೇ ಪರೀಕ್ಷೆ ಮಾಡಿಸಿಕೊಳ್ಳಲು ಮುಜುಗರ ವಾಗುತ್ತದೆ. ಎಸ್‌ಐಟಿ ಅಧಿಕಾರಿಗಳು ನನಗೆ ಮುಜುಗರ ಉಂಟು ಮಾಡಲೆಂದೇ ಎರಡೆರಡು ಬಾರಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ನನಗೆ ಅನ್ನಿಸುತ್ತಿದೆ. ಮುಂದೆ ಈ ರೀತಿ ಮಾಡದಂತೆ ನ್ಯಾಯಾಲಯದ ಮುಂದೆ ಪ್ರಜ್ವಲ್‌ ಮನವಿ ಮಾಡಿದರು.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ