ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರೆಂದು ಪರಿಗಣಿಸಿ, ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಆಗ್ರಹಿಸಿದೆ.
ಶಿಕ್ಷಣ ಸಚಿವ ಮಧು.ಎಸ್. ಬಂಗಾರಪ್ಪ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಬೆಂಗಳೂರಿನಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಿ ಒತ್ತಾಯಿಸಿದರು.
ಬರುವ ಜುಲೈ ಒಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರಸ್ತುತ ವರ್ಷದ ಇಲಾಖೆಯ ಕ್ರೀಡಾಕೂಟಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಶಿವಕುಮಾರ ಸದಾಪುಲೆ, ಪ್ರಧಾನ ಕಾರ್ಯದರ್ಶಿ ದಿನೇಶ್ ತಾಂದಳೆ, ಉಪಾಧ್ಯಕ್ಷ ವೀರಶೆಟ್ಟಿ ಯಲಮುರುಗೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷರಾದ ರಾಜು ಸಾಗರ್, ರಾಬರ್ಟ್ ಡೇವಿಡ್, ಪ್ರಧಾನ ಕಾರ್ಯದರ್ಶಿ ಓಂಕಾರ ಪಾಟೀಲ, ಕ್ರೀಡಾ ಕಾರ್ಯದರ್ಶಿಗಳಾದ ದತ್ತಾತ್ರೇ ರೆಡ್ಡಿ, ಹಾಜಿ ಪಾಷಾ, ಸುಭಾಷ್ ನಾಯಕ, ಸಂಘಟನಾ ಕಾರ್ಯದರ್ಶಿಗಳಾದ ದಿಲೀಪ್ ಪಾಟೀಲ, ಶಿವಲಿಂಗಯ್ಯ ಸ್ವಾಮಿ, ಗೀತಾ ನಾಟೇಕರ್ ಹಾಜರಿದ್ದರು.
Laxmi News 24×7