Breaking News

ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ನೀರು, ಬಸ್ ಪ್ರಯಾಣ ದರವೂ ಹೆಚ್ಚಳ

Spread the love

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾದ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ, ನೀರಿನ ದರ ಏರಿಕೆಯ ಸುಳಿವು ದೊರೆತಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಬಸ್ ಪ್ರಯಾಣತರ ಹೆಚ್ಚಳ ಬಗ್ಗೆ ಸಾರಿಗೆ ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗದಂತೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ರಾಜ್ಯದ ಜನತೆಗೆ ಬಿಗ್ ಶಾಕ್: ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ನೀರು, ಬಸ್ ಪ್ರಯಾಣ ದರವೂ ಹೆಚ್ಚಳ

ಜೂನ್ 15ರಂದು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿತ್ತು. ಡೀಸೆಲ್ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಸ್ ಪ್ರಯಾಣದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರಿನಲ್ಲಿ ಜಲ ಮಂಡಳಿ ನೀರಿನ ದರ ಪರಿಷ್ಕರಿಸಲು ಮುಂದಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಜಲ ಮಂಡಳಿ ನಷ್ಟಕ್ಕೆ ಸಿಲುಕಿದ್ದು, ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕುಗಳು ಮುಂದೆ ಬರುತ್ತಿಲ್ಲ. 10 ವರ್ಷಗಳಿಂದ ನೀರಿನ ದರವನ್ನು ಪರಿಷ್ಕರಿಸಿಲ್ಲ. ಹೀಗಾಗಿ ದರ ಪರಿಷ್ಕರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ