Breaking News

ಸಹಾಯಕ ಲೋಕೋ ಪೈಲಟ್ ನೇಮಕಾತಿ: ನೈಋತ್ಯ ರೈಲ್ವೆ ವಲಯಕ್ಕೆ ಎಷ್ಟು ಹುದ್ದೆಗಳು?

Spread the love

ಹುಬ್ಬಳ್ಳಿ, ಜೂನ್ 20: ಭಾರತೀಯ ರೈಲ್ವೆ ಇಲಾಖೆ ಸಹಾಯಕ ಲೋಕೋ ಪೈಲಟ್ ನೇಮಕಾತಿಗೆ ಹೆಚ್ಚಿನ ಆದ್ಯತೆ ನೀಡಿದೆ. ರೈಲು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಹಾಯಕ ಲೋಕೋ ಪೈಲಟ್ ನೇಮಕಾತಿಯ ಸಂಖ್ಯೆಯನ್ನು ಏರಿಕೆ ಮಾಡಿ ಆದೇಶಿಸಿದೆ. ಶೀಘ್ರದಲ್ಲೇ ನೇಮಕಾತಿ ಆರಂಭವಾಗಲಿದೆ.

ಸಹಾಯಕ ಲೋಕೋ ಪೈಲಟ್ ನೇಮಕಾತಿ: ನೈಋತ್ಯ ರೈಲ್ವೆ ವಲಯಕ್ಕೆ ಎಷ್ಟು ಹುದ್ದೆಗಳು?

ಮುಂದಿನ 6-8 ತಿಂಗಳಿನಲ್ಲಿ ಭಾರತೀಯ ರೈಲ್ವೆ 18,799 ಸಹಾಯಕ ಲೋಕೋ ಪೈಲಟ್‌ಗಳ ನೇಮಕಾತಿ ಮಾಡಿಕೊಳ್ಳಲಿದೆ. ಯಾವ ರೈಲು ವಿಭಾಗಕ್ಕೆ ಎಷ್ಟು ಹುದ್ದೆಗಳು? ಎಂದು ಈಗಾಗಲೇ ಸೂಚನೆ ನೀಡಲಾಗಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸಲು ಅನುಮತಿಸಲಾಗಿದೆ.

ಈ ಹಿಂದೆ ರೈಲ್ವೆ ಇಲಾಖೆ 5,696 ಸಹಾಯಕ ಲೋಕೋ ಪೈಲಟ್ ನೇಮಕಾತಿಗೆ ಅನುಮತಿ ನೀಡಿತ್ತು. ಆದರೆ ಜೂನ್ 18ರಂದು ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ. ಹುದ್ದೆಗಳ ಸಂಖ್ಯೆಯನ್ನು 18,799ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ