Breaking News

ಪೆಟ್ರೋಲ್ ಹಾಕಿಸಿಕೊಳ್ಳಲು ಗೋವಾಗೆ ತೆರಳುತ್ತಿರುವ ಗಡಿ ಜಿಲ್ಲೆಯ ಜನ

Spread the love

ಉತ್ತರ ಕನ್ನಡ, ಜೂ.20: ರಾಜ್ಯ ಸರ್ಕಾರ(State government) ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಹೆಚ್ಚಳದಿಂದ ಪೆಟ್ರೋಲ್ ನೂರರ ಗಡಿ ದಾಟಿದೆ. ಇನ್ನು ಡಿಸೇಲ್ ಕೂಡ ಗೋವಾ ರಾಜ್ಯಕ್ಕಿಂತ ಹೆಚ್ಚಾಗಿದ್ದು, ವಾಹನ ಸವಾರರ ಜೇಬು ಬಿಸಿ ಮಾಡುತ್ತಿದೆ.

ಆದ್ರೆ, ಗೋವಾ ಗಡಿಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರ(Karwar)ದಲ್ಲಿ ಸಸ್ತಾ ಗೋವಾ ಮದ್ಯದ ಜೊತೆ ಅತೀ ಕಡಿಮೆ ಬೆಲೆಯಲ್ಲಿ ಸಿಗುವ ಪೆಟ್ರೋಲ್​ಗೆ ಮುಗಿ ಬೀಳುತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗೋವಾಕ್ಕೆ ಸಮೀಪವೇ ಇದ್ದು, ಕಾರವಾರದಿಂದ 15 ಕಿಲೋಮೀಟರ್ ಕ್ರಮಿಸಿದರೇ ಗೋವಾ ರಾಜ್ಯದ ಪೆಟ್ರೋಲ್ ಬಂಕ್​ಗಳು ಸಿಗುತ್ತವೆ.

ಹೀಗಾಗಿ ಕಾರವಾರದ ಜನ ಇದೀಗ ಕರ್ನಾಟಕದಲ್ಲಿ ಪೆಟ್ರೋಲ್ ,ಡಿಸೇಲ್ ಹಾಕಿಸುವ ಬದಲು ನೇರ ಗೋವಾಕ್ಕೆ ತೆರಳಿ ಪೆಟ್ರೋಲ್, ಡಿಸೇಲ್​ಗಳನ್ನು ವಾಹನಕ್ಕೆ ಟ್ಯಾಂಕ್ ಫುಲ್ ಮಾಡಿಸಿಕೊಂಡು, ಲೀಟರ್ ಗಟ್ಟಲೇ ಕ್ಯಾನ್​ಗಳಲ್ಲಿ ತುಂಬಿಸಿಕೊಂಡು ಮರಳುತಿದ್ದಾರೆ. ಇದರಿಂದ ಗೋವಾ ಭಾಗದಲ್ಲಿರುವ ಪೆಟ್ರೋಲ್ ಬಂಕ್​ಗಳಿಗೆ ಹೆಚ್ಚಿನ ಲಾಭವಾಗುತಿದ್ದು, ಭರ್ಜರಿ ವ್ಯಾಪಾರವಾಗುತ್ತಿದೆ.


Spread the love

About Laxminews 24x7

Check Also

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

Spread the loveಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ