Breaking News

ಪರಪ್ಪನ ಅಗ್ರಹಾರ ಜೈಲಲ್ಲಿ ಪವಿತ್ರಾಗೌಡ

Spread the love

ಬೆಂಗಳೂರು, ಜೂ.21- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಗೌಡ ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿದ್ದೆಯಿಲ್ಲದೆ ಚಡಪಡಿಸಿದ್ದಾರೆ. ನಿನ್ನೆ ಪವಿತ್ರಗೌಡ ಸೇರಿದಂತೆ 9 ಆರೋಪಿಗಳನ್ನು ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.

ಪರಪ್ಪನ ಅಗ್ರಹಾರ ಜೈಲಲ್ಲಿ ರಾತ್ರಿ ನಿದ್ದೆಯಿಲ್ಲದೆ ಒದ್ದಾಡಿದ ಪವಿತ್ರಾಗೌಡ

ಆರೋಪಿ ಪವಿತ್ರ ಗೌಡಗೆ ನಿನ್ನೆ ರಾತ್ರಿ ನಿದ್ದೆಯೇ ಬರಲಿಲ್ಲವಂತೆ. 11 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದ ಅವರು, ಸರಿಯಾಗಿ ನಿದ್ದೆ ಬಾರದೆ ಪದೇ ಪದೇ ಎದ್ದು ಕುಳಿತಿದ್ದಾರೆ. ಐಷರಾಮಿ ಜೀವನ ನಡೆಸುತ್ತಿದ್ದ ಪವಿತ್ರ ಗೌಡ ಜೈಲಿನಲ್ಲಿ ರಾತ್ರಿ ಕಳೆಯಲು ಚಡಪಡಿಸಿದ್ದಾರೆ.

ಬೆಳಗ್ಗೆ 5 ಗಂಟೆಗೆ ಎದ್ದು ಜೈಲಿನ ಬ್ಯಾರೆಕ್ನಲ್ಲಿ ವಾಕಿಂಗ್ ಮಾಡಿ ಬಳಿಕ ಜೈಲಿನ ಸಿಬ್ಬಂದಿ ನೀಡಿದ ಕಾಫಿ ಕುಡಿದು ಪೇಪರ್ ಓದಿ, ಜೈಲಿನ ತಿಂಡಿ ತಿಂದಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ