ಬೆಂಗಳೂರು,ಜೂ.22- ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್ ದಯನೀಯ ಸೋಲು ಅನುಭವಿಸಿದೆ ಎಂದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು ಈಗಿನಿಂದಲೇ ಪ್ರಯತ್ನ ಆರಂಭಿಸಬೇಕು. ಕಾರ್ಯಕರ್ತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಯಿತು. ಟಿಕೆಟ್ ಕೊಡುವುದರಲ್ಲಿ ಆದ ವ್ಯತ್ಯಾಸದಿಂದ ಇನ್ನೂ 3-4 ಸೀಟು ನಾವು ಕಳೆದುಕೊಂಡೆವು ಎಂದು ಪುನರುಚ್ಚರಿಸಿದರು.