ಬೆಂಗಳೂರು, ಜೂನ್ 21: ಹಿರಿಯ ಲೇಖಕಿ ಕಮಲಾ ಹಂಪನಾ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ.
ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ.
ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ ಎಂದರು.ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.