ಹಾಸನ, (ಜೂನ್ 23): ಇತ್ತ ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತನೋರ್ವ, ಸೂರಜ್ ರೇವಣ್ಣ (Suraj Revanna) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ.
ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್ ಮೇಲ್ ದೂರು ನೀಡಿದ್ದಾನೆ.
ಆದ್ರೆ, ಇದೀಗ ಸಂತ್ರಸ್ತನ ದೂರಿನ ಅನ್ವಯ ಸೂರಜ್ನನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆಯೇ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದಾರೆ.
ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ ನಂತರ ಶಿವಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆ ನಾಪತ್ತೆಯಾಗಿದ್ದಾನೆ.
ಸಂತ್ರಸ್ತನ ವಿರುದ್ಧ ಶಿವಕುಮಾರ್ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹೋಗಿಯೇ ಸೂರಜ್ ರೇವಣ್ಣ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗ ಶಿವಕುಮಾರ್, ಸೂರಜ್ ರೇವಣ್ಣ ಜೊತೆಗಿದ್ದೇ ಪಿತೂರಿ ನಡೆಸಿದ್ನಾ? ಬೇರೆಯವರ ಜೊತೆ ಸೇರಿ ಟ್ರ್ಯಾಪ್ ಮಾಡಿದ್ನಾ? ಹೀಗೆ ಹಲವು ಅನುಮಾನಗಳು ಎಡೆಮಾಡಿಕೊಟ್ಟಿವೆ.