ನವದೆಹಲಿ, ಜೂನ್ 23: ಲೋಕಸಭೆ ಚುನಾವಣೆ 2024ರ ಬಳಿಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರ ಸೋಮವಾರ ಆರಂಭವಾಗಲಿದೆ. ಲೋಕಸಭೆ ಸದಸ್ಯರ ಪ್ರಮಾಣ ವಚನ ಎರಡು ದಿನಗಳ ಕಾಲ ನಡೆಯಲಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಮತ್ತು 7 ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ.
ನೂತನ ಸದಸ್ಯರ ಪ್ರಮಾಣ ವಚನ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿಯೇ ನಡೆಯಲಿದೆ.
ಜೂನ್ 26ರಂದು ಲೋಕಸಭೆ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ, ಜೂನ್ 27ರಂದು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಹಂಗಾಮಿ ಸ್ಪೀಕರ್ ಆಯ್ಕೆ ವಿಚಾರ ಕಲಾಪದಲ್ಲಿ ಕೋಲಾಹಲ ಎಬ್ಬಿಸುವ ನಿರೀಕ್ಷೆ ಇದೆ.